ಬೆಂಗಳೂರು: ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರೆದಿದೆಯಾದರೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರ, ಹಿರೆಕೆರೂರು, ಕುಶಾಲನಗರ, ಹಾರಂಗಿ, ಭಾಗಮಂಡಲ, ನಾಪೋಕ್ಲು, ಎಂಎಂ ಹಿಲ್ಸ್, ಶೃಂಗೇರಿ, ಬಂಡೀಪುರ, ಕೆಆರ್ ನಗರ, ಹೆಸರಘಟ್ಟ, ಕಳಸ, ಬೇಗೂರು, ಆಗುಂಬೆಯಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಅಲ್ಪ ಪ್ರಮಾಣದ ಮಳೆಯಾಗಿದೆ, ಇಂದೂ ಸಹ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.