ಭಾರೀ ಮಳೆಗೆ ಬೆಂಗಳೂರಿನಲ್ಲಿ ಧರೆಗುರುಳಿದ 206 ಮರಗಳು, ಹಲವು ವಾಹನಗಳು ಜಖಂ!

ಬೆಂಗಳೂರು (Bengaluru Rains) ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (Heavy Rains), ಒಂದೇ ಸಮನೆ ಸುರಿದ ಬಿರುಸಿನ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರಲ್ಲಿ ನೂರಾರು ಮರಗಳು ಧರೆಗುರುಳಿ ಹಲವು ಕಾರುಗಳು ಜಖಂಗೊಂಡಿವೆ.

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ನಗರದ ಬಹುತೇಕ ಭಾಗಗಳಲ್ಲಿ ಮರಗಳು ಧರೆಗುರುಳಿವೆ. ನಿನ್ನೆ ಒಂದೇ ದಿನ ಬರೋಬ್ಬರಿ 206 ಮರಗಳು ಧರೆಗೆ ಉರುಳಿದೆ ಎಂಬ ಮಾಹಿತಿ ಸಿಕ್ಕಿದೆ.

ಬೆಂಗಳೂರಿನ 38 ಪ್ರದೇಶಗಳಲ್ಲಿ ರಸ್ತೆ, ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ದೂರು ಬಂದಿವೆ. ಸದ್ಯ ರಸ್ತೆಗಳಲ್ಲಿ ನಿಂತಿದ್ದ ನೀರು ಖಾಲಿಯಾಗುತ್ತಿದ್ದು, ಪ್ರಮುಖ ರಸ್ತೆಗಳಲ್ಲಿ ಬಿದ್ದ ಮರಗಳನ್ನು ತೆರವು ಮಾಡಲಾಗುತ್ತಿದೆ. ರಾತ್ರಿ ಸುರಿದ ಮಳೆಯಿಂದಾಗಿ ಸಿಲಿಕಾನ್ ಸಿಟಿ ಜನರು ಹೈರಾಣಾಗಿದ್ದಾರೆ.

ಬೆಂಗಳೂರಿನ ಹಾಸ್ ಮ್ಯಾಟ್ ಆಸ್ಪತ್ರೆ ಸಿಗ್ನಲ್ ಬಳಿ ಚಲಿಸುತ್ತಿದ್ದ ಕಾರು ಮತ್ತು ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಸದ್ಯ ಕಾರು, ಆಟೋದಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಎರಡು ವಾಹನಗಳು ಜಖಂಗೊಂಡಿದ್ದು, ಸದ್ಯ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಾಮನಗರ ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗಿದ್ದು, ಚನ್ನಪಟ್ಟಣ – ರಾಮನಗರದಲ್ಲಿ ಮಳೆಯ ಅಬ್ಬರ ಜೋರಾಗಿದೆ.

More articles

Latest article

Most read