ದಕ್ಷಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಸಾವು

ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗೆ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ನಿನ್ನೆ ತಡೆ ರಾತ್ರಿ ಗಾಳಿ ಮಳೆಗೆ ನೆಲಕ್ಕುರಿಳಿದ ವಿದ್ಯುತ್​ ತಂತಿ ಸ್ಪರ್ಶಿಸಿ ಆಟೋ ಚಾಲಕರಿಬ್ಬರು ಮೃತಪಟ್ಟಿದ್ದರು. ಇದೀಗ ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದಲ್ಲೇ ವರದಿಯಾಗಿದೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಮೃತ ಯುವತಿ. ಬುಕ್ ಮಾಡಿದ್ದ ಪಾರ್ಸೆಲ್ ಪಡೆಯಲು ಮನೆಯಿಂದ ಹೊರಗೆ ಬಂದಾಗ ಮಖೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಈ ಘಟನೆ ಸಂಭವಿಸಿದೆ.

ನಿನ್ನೆ ಮತ್ತು ಇವತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿಯವರೆಗೆ 7 ಜನರು ದುರ್ಮರಣ ಹೊಂದಿದ್ದಾರೆ.

ಉಳ್ಳಾಲದಲ್ಲಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನಪ್ಪಿದ್ದರು. ಆ ಘಟನೆ ಮಾಸುವ ಮುನ್ನ ಆಟೋ ಚಾಲಕರಿಬ್ಬರು ಮನೆ ಬಳಿ ನಿಲ್ಲಿಸಿದ್ದ ಆಟೋ ತೊಳೆಯಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಬಲಿಯಾಗಿದ್ದರು.

More articles

Latest article

Most read