ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ

Most read

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 25 ದಿನಾಂಕ 29ರವರೆಗೆ ವ್ಯಾಪಕ ಮಳೆಯಾಗಲಿದೆ. ಪೂರ್ವ ಅರೇಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ, ಕೇರಳದ ಕರಾವಳಿ ಭಾಗದಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ. ಎಂದು ಹವಮಾನ ಇಲಾಖೆ ತಿಳಿಸಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.‌

ವ್ಯಾಪಕ‌ ಮಳೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮುನ್ಸೂಚನೆಯಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.‌ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ಹಲವು ಕಡೆ ಭಾರೀ ಮಳೆ ಸಾಧ್ಯತೆಯಿದೆ. ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.   ಬೆಳಗಾವಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲೂ‌ ಭಾರೀ ಮಳೆ‌ಯ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮುಂಗಾರು ಮಳೆ ಚುರುಕಾಗುತ್ತಿದೆ. ಜೂನ್ ಆರಂಭದಲ್ಲೇ ವಾಡಿಕೆಗಿಂತ ಹೆಚ್ಚಿನ ಮುಂಗಾರು ಮಳೆಯಾಗಿದೆ. ಕಳೆದ ಬಾರಿಗಿಂತ ರಾಜ್ಯದಲ್ಲಿ 62% ನಷ್ಟು ಹೆಚ್ಚಿದ ವಾಡಿಕೆಯ ಮುಂಗಾರು ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಳೆಗೆ ಕುಸಿದ ಗೋಡೆ, ನಾಲ್ವರು ಸಾವು

ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ. ಮನೆಯೊಳಗಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

More articles

Latest article