ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಇಂದಿನಿಂದ ಐದು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 11ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.