ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕಲಬುರಗಿ, ಯಾದಗಿರಿ, ದಕ್ಷಿಣ ಕರ್ನಾಟಕ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 5 ದಿನಗಳಲ್ಲಿ ಚಂಡಮಾರುತ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.