ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ.
ಈ ಬಾರಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕೃಷಿ ಚಟುವಟಿಕೆಗಳು ಬಹುತೇಕ ಜೂನ್, ಜುಲೈ, ಆಗಸ್ಟ್ ಹಾಗೂ ಸೆಪ್ಟಂಬರ್ ತಿಂಗಳಲ್ಲಿ ನಡೆಯಲಿದ್ದು ಇದಕ್ಕೆ ಸಹಾಯವಾಗಲಿದೆ.
ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ.