ರಾಜ್ಯದಲ್ಲಿ ಜೂನ್ 13ರ ವರೆಗೂ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Most read

ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (Karnataka Rain).

ರಾಜ್ಯದಲ್ಲಿ ನಿನ್ನೆ ರಾತ್ರಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಇಂದು ಸಹ ಮುಂದುವೆಯಲಿದೆ. ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲೆಿಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (30-40 kmph) ಸಂಭವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

More articles

Latest article