ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Most read

ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.

ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಳೆಯಾಗಲಿದೆ.

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ತುಮಕೂರಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.

ಕೊಡಗು, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಇನ್ನು ಕೆಲವೆಡೆ ಮಳೆಯಾಗಬಹುದು ಎಂದು ಸೂಚನೆ ಸಿಕ್ಕಿದೆ.

More articles

Latest article