ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್, ರಿಚ್ ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ ಬೆಂಗಳೂರಿಗೆ ವರುಣನ ಸಿಂಚನವಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪನೆಯ ವಾತಾವರಣ ಮೂಡಿದ್ದು ನಿಧಿ ಸಿಕ್ಕಷ್ಟೇ ಸಂತೋಷವಾಗಿದೆ.
ರಾಜ್ಯಾದ್ಯಂತ ತಾಪಮಾನ ಏರಿಕೆ ನಡುವೆಯೇ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಇನ್ನೂ ಮೂರು ದಿನ ಅಂದರೆ ಮಾರ್ಚ್ 14ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅಕಾಲಿಕ ಮಳೆ ಬೆಂಗಳೂರಿನ ನಾಗರೀಕರಲ್ಲಿ ಅಚ್ಚರಿಯನ್ನುಂಟು ಮಾಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮಾರ್ಚ್ 11 ರಿಂದ 13 ರವರೆಗೆ ಬೆಂಗಳೂರು ನಗರ ಸೇರಿದಂತೆ 12 ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಮಳೆಯನ್ನು ನಿರೀಕ್ಷೆ ಮಾಡಬಹುದು.