ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಳೆ ಮಾರುತಗಳ ಪ್ರಭಾವದಿಂದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧೆಡೆ ಮೋಡ ಕವಿದ ವಾತಾವರಣ ಉಂಟಾಗಿದೆ. ಕೆಲವು ಕಡೆ ತುಂತುರು ಮಳೆಯಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ