ಜಲವರ್: ಸರ್ಕಾರಿ ಶಾಲಾ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಾಯಗೊಂಡಿರುವ ದುರಂತ ಘಟನೆ ರಾಜಸ್ಥಾನದ ಜಲವರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮನೋಹರ್ತನ ಬ್ಲಾಕ್ ನ ಪೀಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಮಕ್ಕಳು ಕೋಣೆಗಳಲ್ಲಿ ಕುಳಿತುರುವಾಗ ಈ ದುರ್ಘಟನೆ ನಡೆದಿದೆ.
ಕಟ್ಟಡ ಕುಸಿದು ಬೀಳುತ್ತಿದ್ದಂತೆ ನಾಲ್ವರು ಮಕ್ಕಳು ಮೃತಪಟ್ಟು 17 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಹತ್ತು ಮಕ್ಕಳನ್ನು ಜಲವರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಮೂರರಿಂದ ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಜಲವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಕರು ಮತ್ತು ಗ್ರಾಮಸ್ಥರ ಸಹಾಯದಿಂದ ಮಕ್ಕಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.