ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಚರ್ಚೆಯಾಗುತ್ತಿರುವ ಬೆನ್ನಲ್ಲೇ ತಿರುಪತಿ ಲಡ್ಡುವನ್ನು ಈ ವರ್ಷದ ಆರಂಭದಲ್ಲಿ ಅಯೋಧ್ಯೆಯ ರಾಮಮಂದಿದ ರಾಮ ಪ್ರಾಣಪ್ರತಿಷ್ಠೆ ಸಮಾರಂಭದಲ್ಲಿ ತಿರುಪತಿ ದೇವಸ್ಥಾನದಿಂದ 300 ಕೆಜಿ ಲಡ್ಡು ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗಿದೆ ಎಂದು ಅಯೋಧ್ಯೆ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಶುಕ್ರವಾರ ಹೇಳಿದ್ದಾರೆ.
ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಿದ್ದರೆ ಅದು ಅಕ್ಷಮ್ಯ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ಕುರಿತು ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕರು ಒತ್ತಾಯಿಸಿದರು.
ವೈಷ್ಣವ ಸಂತರು ಮತ್ತು ಭಕ್ತರು ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಸಹ ಬಳಸುವುದಿಲ್ಲ. ಇಂತಹ ಸಂದರ್ಭದಲ್ಲಿ ನೈವೇದ್ಯದಲ್ಲಿ ಕೊಬ್ಬನ್ನು ಬಳಸಿರುವುದು ಅತ್ಯಂತ ದುರದೃಷ್ಟಕರ. ಇದು ಹಿಂದೂ ನಂಬಿಕೆಯ ಅಪಹಾಸ್ಯ. ಪ್ರಮುಖ ಏಜೆನ್ಸಿಗಳು ಇದನ್ನು ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.