ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಸಚಿವ ಸಂಪುಟ ನಿರ್ದಾರ

Most read

ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಿಸಿಕೊಳ್ಳಲಿದೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು, ರಾಮನಗ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಲಾಗಿದೆ. ಆದರೆ ಜಿಲ್ಲಾ ಕೇಂದ್ರ ರಾಮನಗರದಲ್ಲೇ ಇರಲಿದೆ ಎಂದರು. ಈ ಬದಲಾವಣೆಯಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ತಗುಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಹೆಸರು ಬದಲಾವಣೆ ಮಾಡುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ಭೂ ದಾಖಲೆಗಳು ರಾಜ್ಯ ಪಟ್ಟಿಗೆ ಒಳಪಡುವುದರಿಂದ ಯಾವುದೇ ಅಡಚಣೆ ಉಂಟಗುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ ಸ್ಪಷ್ಟಪಡಿಸಿದರು.

More articles

Latest article