ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿ ಇರುವವರೆಗೂ ಪಕ್ಷದ ಕಾರ್ಯಕ್ರಮಕ್ಕೆ ಹೋಗಲ್ಲ: ರಮೇಶ್ ಜಾರಕಿಹೊಳಿ

Most read

ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಆದರೆ ಬಿಜೆಪಿಯಲ್ಲಿ ನಾಯಕರ ನಡುವಿನ ಅಸಮಧಾನ ಭುಗಿಲೆದ್ದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಪಕ್ಷದ ಅಧ್ಯಕ್ಷನಾಗಿರುವವರೆಗೂ ನಾನು ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗುವುದಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಉಪ ಚುನಾವಣೆ ಕುರಿತು ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, “ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ವಿಜಯೇಂದ್ರ ಅಧ್ಯಕ್ಷ ಸ್ಥಾನದಲ್ಲಿ ಇರುವವರೆಗೂ ನಾನು ಪ್ರಚಾರಕ್ಕೆ ಹೋಗುವುದಿಲ್ಲ. ವಿಜಯೇಂದ್ರ‌ ‌ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ ಸಿಎಂ ಆಗಲು ಯೋಗೇಶ್ವರ ಕಾರಣ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ ಹಾಗೂ ನಾನು, ಎನ್ ಆರ್ ಸಂತೋಷ ಮೂರು ಜನ ಪ್ರಂಟ್ ಲೈನ್‌ನಲ್ಲಿ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಇದ್ದಾಗ ಸಿದ್ದರಾಮಯ್ಯನವರ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಆದರೆ ಈಗ ಕೆಲವೊಂದು ವಿಷಯಗಳನ್ನು ಬಹಿರಂಗ ಪಡಿಸಲ್ಲ. ಉಪ ಚುನಾವಣೆ ಪಕ್ಷಕ್ಕೆ ಮುಜುಗರ‌ ಆಗೋದು ಬೇಡ ಎಂದು ಹೇಳಿದ್ದಾರೆ.

More articles

Latest article