ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಆರೋಪಿಯ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‌ಐಎ

Most read

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. 

ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ. ಆರಂಭದಲ್ಲಿ ಪೊಲೀಸರು, ಎಲ್ಲಾ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಚೆಸ್ಮಾ ಹಾಕಿರುವ ದೃಶ್ಯಗಳೇ ಸಿಕ್ಕಿದ್ದವು. ಆದ್ರೆ,  ಸಿಸಿಬಿ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಒಂದು ಫೋಟೋವನ್ನು ಪತ್ತೆ ಮಾಡಿದೆ. ಇದೀಗ ಅದೇ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ (ಟ್ವೀಟ್) ಬಾಂಬರ್​ ಫೋಟೋ ಹಂಚಿಕೊಂಡಿರುವ ಎನ್​ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.

ಷಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆ(ಮಾರ್ಚ್ 05) ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದೆ. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನ NIA ಅಧಿಕಾರಿಗಳಿಗೆ ನೀಡಿದ್ದಾರೆ.

More articles

Latest article