ಬಾಂಬ್ ಸ್ಫೋಟಕ್ಕೆ ಒಳಗಾಗಿದ್ದ ರಾಮೇಶ್ವರಂ ಕೆಫೆ ಇಂದಿನಿಂದ ಪುನರಾರಂಭ

Most read

ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.

ಕೆಫೆಯ ಪ್ರವೇಶ ದ್ವಾರದ ಬಳಿ 2 ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಶನಿವಾರದಿಂದ ಪ್ರತಿ ಗ್ರಾಹಕರನ್ನು ಹ್ಯಾಂಡ್ ಡಿಟೆಕ್ಟರ್ ಮೂಲಕ ತಪಾಸಣೆ ಮಾಡಿಯೇ ಒಳ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತದೆ.

ಕೆಫೆ ಸುತ್ತ ಅಳವಡಿಸಿದ್ದ ಬ್ಯಾರಿಕೇಡ್​ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಮಧ್ಯೆ, ಪೊಲೀಸ್ ಸಮ್ಮುಖದಲ್ಲೇ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1ರಂದು ಶುಕ್ರವಾರ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಬಾಂಬ್ ಇಟ್ಟು ಹೋಗಿದ್ದ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ತನಿಖೆಯೂ ಪ್ರಗತಿಯಲ್ಲಿದೆ.

More articles

Latest article