ಖ್ಯಾತ ಗಾಯಕ ಅಭಿನವ್‌ ಸಿಂಗ್‌ ವಿಷ ಸೇವಿಸಿ ಆತ್ಮಹತ್ಯೆ

Most read



ಬೆಂಗಳೂರು: ಬೆಂಗಳೂರಿನ ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲಸಿದ್ದ ಒಡಿಶಾದ ಖ್ಯಾತ ಗಾಯಕ ಅಭಿನವ್‌ ಸಿಂಗ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರುವರಿ 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇವರು ನಗರದ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಭಾನುವಾರ ರಾತ್ರಿ ಸ್ನೇಹಿತರ ಜತೆಗೆ ತಮ್ಮ  ಅಪಾರ್ಟ್‌ಮೆಂಟ್‌ ನಲ್ಲಿ ಔತಣಕೂಟ ನಡೆಸಿದ್ದರು. ಸ್ನೇಹಿತರು ತೆರಳಿದ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮಾರತ್‌ಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ
ದಾಖಲಿಸಿಕೊಳ್ಳಲಾಗಿದೆ. ಅಭಿನವ್‌ ಸಿಂಗ್‌ ಆತ್ಮಹತ್ಯೆ ಮಾಡಿಕೊಂಡಿದ್ದ ಅಪಾರ್ಟ್‌ಮೆಂಟ್‌ ನ  ಪರಿಶೀಲನೆ ನಡೆಸಲಾಗಿದೆ. ಆದರೆ ಯಾವುದೇ ಡೆತ್‌ ನೋಟ್‌ ದೊರೆತಿಲ್ಲ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪತ್ನಿ ನೀಡಿದ ಕಿರುಕುಳದಿಂದಲೇ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಅಭಿನವ್‌ ಸಿಂಗ್‌ ಅವರ ಪತ್ನಿ
ವಿರುದ್ಧ ಒಡಿಶಾದಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಅಲ್ಲಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

More articles

Latest article