ಠಾಣೆ (ಮಹಾರಾಷ್ಟ್ರ): ಯುವತಿಯ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗುತ್ತಿರುವಾಗ ಮತ್ತೊಬ್ಬ ಸ್ನೇಹಿತೆ ಈ ಕೃತ್ಯವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೈಶಾಚಿಕ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
19 ವರ್ಷದ ಸಂತ್ರಸ್ತ ಯುವತಿಯನ್ನು ಭೇಟಿ ಮಾಡಬೇಕೆಂಬ ಉದ್ದೇಶದಿಂದ ಕರೆಸಿಕೊಂಡು, ನಂತರ ಹೋಟೆಲ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕೃತ್ಯವನ್ನು ಆಕೆಯ ಸ್ನೇಹಿತೆ ಚಿತ್ರೀಕರಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರ ಎಸಗಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ನಂತರ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸ್ನೇಹಿತ, ಆಕೆಯ ಸ್ನೇಹಿತೆ ಮತ್ತು ಮತ್ತೋರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.