ಶ್ವಾನದ ಮೇಲೆ ಅತ್ಯಾಚಾರ: ಓರ್ವ ಆರೋಪಿ ಪೊಲೀಸ್‌ ವಶಕ್ಕೆ

Most read

ಬೆಂಗಳೂರು: ಕಾಮುಕನೊಬ್ಬ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿ, ಗಾಯಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ದುಷ್ಕೃತ್ಯ ಕುರಿತು ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯನಗರದ ಶಾಲಿನಿ ಗ್ರೌಂಡ್ ಬಳಿ ಬೀದಿ ನಾಯಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಈತ ನಾಯಿಯ ಖಾಸಗಿ ಅಂಗವನ್ನು ಕತ್ತರಿಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.  ಈ ಕೃತ್ಯದಲ್ಲಿ ನ್ನೂ ಇಬ್ಬರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿದ್ಯಾ ಎಂಬ ಯುವತಿ ದಿನನಿತ್ಯ ಬೀದಿ ನಾಯಿಗಳಿಗೆ ಊಟ ಹಾಕುತ್ತಾರೆ. ಶುಕ್ರವಾರ ರಾತ್ರಿಯೂ ಊಟ ಹಾಕಲು ಬಂದಾಗ, ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವುದನ್ನು ಕಂಡು ಸ್ಥಳೀಯರನ್ನು ಕರೆದಿದ್ದಾರೆ. ಸ್ಥಳಕ್ಕೆ ಬಂದ ಸಾರ್ವಜನಿಕರು ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಗಾಯಗೊಂಡಿದ್ದ ಶ್ವಾನವನ್ನು ಪ್ರಾಣಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಚಿಕಿತ್ಸೆ ನೀಡಲಾಗುತ್ತಿದೆ.

More articles

Latest article