Sunday, July 14, 2024

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಅರ್ಜಿ ಹಾಕಲು ಮಾನದಂಡವೇನು?

Most read

ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ ವಿಲೇವಾರಿ ಮಾಡಿ ಏ.1ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ವಿಧಾನಸಭೆಗೆ ಇಂದು ಮಾಹಿತಿ ನೀಡಿದ್ದಾರೆ.

ಶಾಸಕರಾದ ನಯನಾ ಮೋಟಮ್ಮ ಮತ್ತು ಯಶಪಾಲ್‌ ಸುವರ್ಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವ ಕಾರ್ಯ ನಡೆಯುತ್ತಿದೆ. ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ, ವಿಲೇವಾರಿ ಮಾಡಲು ಜಂಟಿ/ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನಿತರ ಕಾರಣಗಳಿಂದ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ತಹಶೀಲ್ದಾರರ ಶಿಫಾರಸು ವರದಿ ಆಧರಿಸಿ ಬರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಕಾರ್ಡ್‌ ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಇಲ್ಲಿದೆ ಅರ್ಹತೆ ಮತ್ತು ಮಾನದಂಡದ ವಿವರ

ಬಿಪಿಎಲ್ ಕಾರ್ಡ್‌ನ್ನು ಸರಕಾರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿನ ಖಾಯಂ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವ ಕುಟುಂಬಳಿಗೆ ಕೊಡಲಾಗುವುದಿಲ್ಲ. ಅಲ್ಲದೆ 1.20 ಲಕ್ಷ ರೂ.ಗೂ. ಅಧಿಕ ವಾರ್ಷಿಕ ಆದಾಯ ಇದ್ದರೆ, ಲಕ್ಷಕ್ಕೂ ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟೇರ್ ಕೃಷಿ ಭೂಮಿ, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆ ಇದ್ದರೆ ಅಂತವರಿಗೂ ಬಿಪಿಎಲ್ ಕಾರ್ಡ್ ಕೊಡುವುದಿಲ್ಲ. ಅಷ್ಟೇ ಅಲ್ಲದೆ ಜೀವನೋಪಾಯಕ್ಕಾಗಿ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಚಲಾಯಿಸುವವರನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನ ಹೊಂದಿರುವ ಕುಂಟುಂಬಕ್ಕೂ ಬಿಪಿಎಲ್ ಕಾರ್ಡ್‌ ಪಡೆಯು ಅರ್ಹತೆ ಇಲ್ಲ ಎಂದು ಹೇಳಿದರು.

More articles

Latest article