ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಪೊಲೀಸ್ ಅಧಿಕಾರಿ ರವಿ ಕೆ.ಬಿ ಅಪಘಾತದಲ್ಲಿ ದುರ್ಮರಣ

ಬೆಂಗಳೂರು : ಆಗ್ನೇಯ ವಿಭಾಗದ ಪೊಲೀಸ್ ಠಾಣೆಯ ಕ್ರೈಮ್ ವಿಭಾಗದ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರು ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗೃಹ ಸಚಿವ ಪ್ರಿಯಾಂಕರ್ ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದಿದ್ದಾರೆ.

ಕರ್ತವ್ಯನಿಷ್ಠ ಹಾಗೂ ಸಮರ್ಪಣಾ ಮನೋಭಾವದ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿರುವುದು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ. ಅವರ ಅಗಲಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಸ್ನೇಹಿತರ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಘಟನೆಯ ವಿವರ : ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಬಸ್ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ ಬೆಂಗಳೂರು ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ರವಿ ಕೆ.ವಿ. ಸೇರಿ ಬಸ್ ಚಾಲಕ ವಿಕಾಸ್ ಶುಕ್ಲಾ, ಬೆಲಾಲ್ ಅಲಿ ಹಾಗೂ ಜ್ಯೋತಿರಾದಿತ್ಯ ಸಿಂಗ್ ಗೌಡ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಸೈಬರ್ ಕ್ರೈಂ ತಂಡದ ಇತರ ಮೂವರು ಸಿಬ್ಬಂದಿಯೂ ಗಾಯಗೊಂಡಿದ್ದಾರೆ.

ಸಬ್‌ಇನ್‌ಸ್ಪೆಕ್ಟರ್ ರಮೇಶ್ ನಾಯಕ್, ಎಎಸ್‌ಐ ಶ್ರೀನಿವಾಸ್ ಹಾಗೂ ತಾಂತ್ರಿಕ ಸಿಬ್ಬಂದಿ ವಿಶ್ವನಾಥ್​​ಗೆ ಪೆಟ್ಟಾಗಿದ್ದು, ಈ ಪೈಕಿ ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ. ಬಸ್ ಬೆಂಗಳೂರಿನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆರೋಪಿಯೊಬ್ಬನನ್ನು ಹುಡುಕಿಕೊಂಡು ಬೆಂಗಳೂರಿನ ಸೈಬರ್ ಕ್ರೈಂ ತಂಡ ಮಧ್ಯಪ್ರದೇಶಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

ಪೊಲೀಸರ ಪ್ರಕಾರ, ಬಸ್ ನಿಯಂತ್ರಣ ತಪ್ಪಿ ಭೋಪಾಲ್ ಬೈಪಾಸ್‌ನ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಸುಮಾರು ನಾಲ್ವರು ಪ್ರಯಾಣಿಕರು ಹೊರಕ್ಕೆ ಎಸೆಯಲ್ಪಟ್ಟು, 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ.

ಅಪಘಾತದಲ್ಲಿ ಉತ್ತರ ಪ್ರದೇಶದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಅಮಿತ್ ಕುಮಾರ್ ಪ್ರತಾಪ್, ವಿನೋದ್ ಕುಮಾರ್ ಸಿಂಗ್, ಮೀನು ಸಿಂಗ್, ರಕ್ಷಿತ್ ಸಿಂಗ್, ಸುರೇಂದ್ರ ಪ್ರತಾಪ್ ಸಿಂಗ್, ರವಿ ಶರ್ಮಾ, ಎಂಟು ವರ್ಷದ ಪಾರ್ಥ್ ಶರ್ಮಾ, ಸುಮನ್ ಶರ್ಮಾ, ಶ್ರೀನಿವಾಸ್, ಕೇಶವ್, ರಮೇಶ್ ನಾಯಕ್, ಸೋನು ಹಾಗೂ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಸುರೇಂದ್ರ ಪ್ರತಾಪ್ ಸಿಂಗ್, ಸುಮನ್ ಶರ್ಮಾ ಹಾಗೂ ಶ್ರೀನಿವಾಸ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್‌ನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 

More articles

Latest article

Most read