ಸುದ್ದಿಗೋಷ್ಠಿ ಮಾಡುವಾಗಲೇ ಕುಸಿದು ಬಿದ್ದು ಸಿಎಂ ಸಿದ್ದರಾಮಯ್ಯ ಆಪ್ತ, ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ ಸಾವು

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸದಂತೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಾ ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ ಕುಸಿದುಬಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಲಾಲ್ ಬಾಗ್ ಅವರಣದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಕುರಿತು ಕುರುಬರ ಸಂಘದ ಅಧ್ಯಕ್ಷರಾಗಿರುವ ರವಿಚಂದ್ರನ್, ರಾಜ್ಯಪಾಲರ ವಿರುದ್ಧ ಮಾತನಾಡುತ್ತಲೇ ಶಾಕ್ ಹೊಡೆದವರಂತೆ ಪ್ರತಿಕ್ರಿಯೆ ನೀಡಿದ್ದಾರೆ. ಇದಾದ ಮರುಕ್ಷಣವೇ ಚೇರಿನ ಮೇಲಿಂದ ಕುಸಿದು ಬಿದ್ದಿದ್ದಾರೆ. ಇನ್ನು ಅವರನ್ನು ಹತ್ತಿರ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೋಲಾರದ ಚಿಂತಾಮಣಿ ಮೂಲದ ಸಿ.ಕೆ ರವಿಚಂದ್ರನ್ ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಜೊತೆ ಓಡನಾಟ ಹೊಂದಿದ್ದರು. ಜೊತೆಗೆ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಹ  ಓಡಾನಾಟ ಇತ್ತು. ಇತ್ತಿಚ್ಚಿಗೆಷ್ಟೆ ಕಾಂಗ್ರೆಸ್ ಸೇರಿಕೊಂಡಿದ್ದ ರವಿಚಂದ್ರನ್, ಪ್ರಚಾರ ಸಮಿತಿ ಸದಸ್ಯರಾಗಿದ್ದರು.

More articles

Latest article

Most read