ಆರ್‌ ಸಿಬಿ ಸಂಭ್ರಮ: ಮೃತಪಟ್ಟ ಕುಟುಂಬಗಳಿಗೆ ಕೆಎಸ್‌ ಸಿಎ 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ಬೆಳಗಾವಿ: ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ ಸಿ ಬಿ ತಂಡದ ಸಂಭ್ರಮಾಚರಣೆ ವೇಳೆ ಮೃತಪಟ್ಟ ಕುಟುಂಬದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ ಸಿಎ) ಹಾಗೂ ಆರ್ ಸಿಬಿ ಮ್ಯಾನೇಜ್‌ ಮೆಂಟ್ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರ್ ಸಿಬಿ ಸಂಭ್ರಮಾಚರಣೆ ವೇಳೆ ಅಭಿಮಾನಿಗಳ ಸಾವು ನೋವು ತಂದಿದೆ. ಆರ್ ಸಿಬಿ ಹಾಗೂ ಕೆಎಸ್‌ ಸಿಎ ಹೆಚ್ಚಿನ ಪರಿಹಾರ ಕೊಡಬೇಕು ಎಂದರು.
ಈ ದುರಂತ ಪ್ರಕರಣದಲ್ಲಿ ವಿರೋಧ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ. ಪಕ್ಷದ ಹಿರಿಯ ಮುಖಂಡರು ವಿಪಕ್ಷಗಳ ನಾಯಕರ ಆರೋಪಗಳಿಗೆ ತಕ್ಕ ಉತ್ತರ ಕೊಡಲಿದ್ದಾರೆ. ರಾಜಕಾರಣ ಮಾಡುವದಕ್ಕಿಂತ ದುರಂತ ಏಕೆ ಸಂಭವಿಸಿತು ಎನ್ನುವುದನ್ನು ತಿಳಿಯುವುದು ಮುಖ್ಯ. ಇಂತಹ ದುರ್ಘಟನೆ ನಡೆದಿದ್ದು ನಿಜಕ್ಕೂ ದುರದೃಷ್ಟಕರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೋಕ ವ್ಯಕ್ತಪಡಿಸಿದ್ದಾರೆ.

More articles

Latest article

Most read