ಆರ್ ಸಿ ಬಿ ಸಂಭ್ರಮದ ಸೂತಕ: ದಾಖಲಾಗದ ಎಫ್ ಐ ಆರ್; ಅಸಹಜ ಸಾವು ಪ್ರಕರಣ, ಪೋಷಕರ ಆಕ್ರೋಶ

ಬೆಂಗಳೂರು: ಆರ್ ಸಿ ಬಿ ಆಟಗಾರರ ವಿಜಯೋತ್ಸವ ಕಾರ್ಯಕ್ರಮದಲ್ಲಿ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಈ ದುರಂತ ಕುರಿತು ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಹಾಜರಾಗಲಿದ್ದಾರೆ.

ನಿನ್ನೆ ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕ್ರಿಕೆಟ್‌ ಅಭಿಮಾನಿಗಳು ಹೈಕೋರ್ಟ್ ಕಟ್ಟಡದ ಮೇಲಿ ನಿಂತು ಸಂಭ್ರಮಿಸುತ್ತಿದ್ದರು. ಈ ಸಂದರ್ಭದ ಫೋಟೋ ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಭದ್ರತಾ ಲೋಪವಾಗಿರುವುದು ಕಂಡು ಬಂದಿದೆ. ಈ ಬಗ್ಗೆಯೂ ಹೈಕೋರ್ಟ್ ಸರ್ಕಾರದಿಂದ ವಿವರಣೆ ಕೇಳಿದೆ.

ದಾಖಲಾಗದ ಎಫ್ ಐ ಆರ್:

ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಆರ್‌ ಸಿಬಿ ವಿಜಯೋತ್ಸವ ಆಚರಣೆ ನಡೆಯುತ್ತಿದ್ದಾಗ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ವಿವಿಧ ಪ್ರವೇಶ ದ್ವಾರಗಳ ಬಳಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 47 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆದರೆ ಇದುವರೆಗೂ ಎಫ್ ಐಆರ್ ದಾಖಲಾಗಿಲ್ಲದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಯುಡಿಆರ್ (ಅಸಹಜ ಸಾವು) ಪ್ರಕರಣಗಳು ದಾಖಲಾಗಿವೆ. ಮೃತರ ಪಟ್ಟಿಯನ್ನು ಸರ್ಕಾರವೇ ಬಿಡುಡೆ ಮಾಡಿದ್ದು ‘ಅಸಹಜ ಸಾವು (UDR)’ ಎಂದಷ್ಟೇ ಪ್ರಕರಣ ದಾಖಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.

ಕಾಲ್ತುಳಿತ ಘಟನೆಯಲ್ಲಿ ಭೂಮಿಕ್ (20), ಸಹನಾ (19), ಪೂರ್ಣಚಂದ್ರ (32), ಚಿನ್ಮಯಿ (19), ದಿವ್ಯಾಂಶಿ (13), ಶ್ರವಣ್ (20), ದೇವಿ (19), ಶಿವಲಿಂಗ್ (17) ಮನೋಜ್ (33), ಅಕ್ಷತಾ ಸೇರಿ 11 ಮಂದಿ ಮೃತಪಟ್ಟ ದುರ್ದೈವಿಗಳು. ವಿವಿಧ ಆಸ್ಪತ್ರೆಗಳಲ್ಲಿ 47 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ಹೊಣೆ ಮಾಡಿಲ್ಲ. ಅಸಹಜ ಸಾವು ಪ್ರಕರಣ ಎಂದಷ್ಟೇ ಹೊಣೆ ಮಾಡಿ ಎಫ್ ಐ ಆರ್ ದಾಖಲಿಸಬೇಕು ಎಂದು ಮೃತರ ಕುಟುಂಬದವರು ಒತ್ತಾಯಿಸುತ್ತಿದ್ದಾರೆ.

More articles

Latest article

Most read