ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಹಲವು ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರದ ಆದೇಶ

Most read

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೆ ಒಳಪಡುವ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ ಮಾಡಲು ನಿರ್ಧರಿಸಲಾಗಿದೆ ಎಂದು  ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದೆ.

ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ  ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಆದೇಶ ನೀಡಿದೆ.

‘ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ ಮತ್ತು ಭ್ರಷ್ಟಾಚಾರ ತಡೆಯಲು ಸಿಬ್ಬಂದಿ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಇದರ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಪುಸಕ್ತ ವರ್ಷ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಕೈಗೊಳ್ಳಲಾಗಿದೆ ಎಂದು ಘೋಷಿಸಲಾಗಿದೆ.

More articles

Latest article