Wednesday, December 11, 2024

ಇಂಡಿಯಾ ಮೈತ್ರಿಕೂಟ ಮುನ್ನೆಡಸಲು ಸಿದ್ಧ; ಮಮತಾ ಬ್ಯಾನರ್ಜಿ ಇಂಗಿತ

Most read

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಕಾರ್ಯವೈಖರಿಗೆ ಅಸಮಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ಸಿಕ್ಕರೆ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನೆಡೆಸುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ಮುನ್ನಡೆಸಲು ಸಿದ್ಧ ಎಂದು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

ನಾನು ಇಂಡಿಯಾ ಒಕ್ಕೂಟವನ್ನು ರಚಿಸಿದ್ದೇನೆ, ಈಗ ಅದನ್ನು ನಿರ್ವಹಿಸುವುದು ಮುನ್ನಡೆಸುವವರಿಗೆ ಬಿಟ್ಟದ್ದು. ಅವರು ಉತ್ತಮ ಪ್ರದರ್ಶನವನ್ನು ನೀಡಲು ಸಾಧ್ಯವಾಗದಿದ್ದರೆ, ನಾನು ಏನು ಮಾಡಲು ಸಾಧ್ಯ? ಎಲ್ಲರೂ ಜೊತೆಯಲ್ಲಿ ಮುನ್ನಡೆಸಬೇಕು ಎಂದಷ್ಟೇ ನಾನು ಹೇಳ ಬಯಸುತ್ತೇನೆ. ಅವಕಾಶ ನೀಡಿದರೆ ನಾನು ಇಂಡಿಯಾ ಒಕ್ಕೂಟವನ್ನು ನಿಭಾಯಸಿಸಬಲ್ಲೆ. ಆದರೆ ನಾನು ಪಶ್ಚಿಮ ಬಂಗಾಳದಿಂದ ಹೊರ ಹೋಗಲು ಬಯಸುವುದಿಲ್ಲ. ಇಲ್ಲಿಂದಲೇ ಮುನ್ನಡೆಸಲು ನನಗೆ ಸಾಧ್ಯ ಎಂದು ಅವರು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟವನ್ನು ಎದುರಿಸಲು ಇಂಡಿಯಾ ಮೈತ್ರಿಕೂಟ ರಚನೆಯಾಘಿದ್ದು, ಇಪ್ಪತ್ತಕ್ಕೂ ಹೆಚ್ಚು ವಿರೋಧ ಪಕ್ಷಗಳನ್ನು ಹೊಂದಿದೆ. ಆದರೂ ಮೈತ್ರಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಸಮನ್ವಯದ ಕೊರತೆಯ ಕಾರಣಕ್ಕೆ ಹಿನ್ನೆಡೆ ಅನುಭವಿಸುತ್ತಿದೆ. ತಮ್ಮ ಅಹಂಗಳನ್ನು ಬದಿಗಿಟ್ಟು ಮಮತಾ ಬ್ಯಾನರ್ಜಿ ಅವರನ್ನು ಇಂಡಿಯಾ ಒಕ್ಕೂಟದ ನಾಯಕಿಯಾಗಿ ಆರಿಸಬೇಕು ಎಂದು  ಟಿಎಂಸಿ ಪಕ್ಷದ ಸಂಸದ ಕಲ್ಯಾಣ್ ಬ್ಯಾನರ್ಜಿ ಕಾಂಗ್ರೆಸ್ ಮತ್ತು ಇತರ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳಿಗೆ ಕರೆ ನೀಡಿದ್ದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದ್ದು, ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ಪ್ರಚಂಡ ವಿಜಯ ಸಾಧಿಸಿದೆ. ಜಾರ್ಖಂಡ್ ಚುನಾವಣೆಯಲ್ಲಿ ಜೆಎಂಎಂ ಕೂಡಾ ಅದ್ಭುತ ಪ್ರದರ್ಶನ ನೀಡಿದ್ದು ಇಂಡಿಯಾ ಮೈತ್ರಿಕೂಟ ಅಧಿಕಾರ ವಹಿಸಿಕೊಂಡಿದೆ. ಆದರೂ ಕಾಂಗ್ರೆಸ್ ತನ್ನ ಸೋಲಿನ ಸರಣಿಯನ್ನು ಮುಂದುವರೆಸಿದೆ. ಮಹಾರಾಷ್ಟ್ರದಲ್ಲಿ ಕಳಪೆ ಪ್ರದರ್ಶನ ತೋರಿದೆ. ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ ಜತೆ ಸಣ್ಣ ಮಿತ್ರ ಪಕ್ಷವಾಗಿ ಉಳಿದುಕೊಂಡಿದೆ.

More articles

Latest article