ಬೆಂಗಳೂರು : ಕರ್ತವ್ಯ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಾಯಿಸಿ ಕೊಳ್ಳದ ಸರ್ಕಾರಿ ಅಧಿಕಾರಿ ಹಾಗೂ ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದ್ದಾರೆ.
ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಸಿಇಒಗಳಿಗೆ ಪತ್ರ ಬರೆದು ಕಡ್ಡಾಯ ನೋಂದಾಯಿಸಿಕೊಳ್ಳಬೇಕು. ನೋಂದಾಯಿಸಿಕೊಂಡವರ ಬಗ್ಗೆ ವರದಿಯನ್ನು ಏಳು ದಿನಗಳ ಒಳಗೆ ನೀಡಬೇಕು ಎಂದು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗುವಂತೆ ಸೂಚಿಸಬೇಕು ಎಂದು ಹೇಳಿದ್ದರು. ಅಲ್ಲದೆ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಣಿ ಮಾಡಿಕೊಂಡು ಪ್ರತಿ ದಿನ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಆದೇಶಿಸಿದ್ದರು.
ರಾಜ್ಯದಲ್ಲಿ ಇಲ್ಲಿವರೆಗೆ 2,12,925 ಅಧಿಕಾರಿಗಳು ಹಾಗೂ ನೌಕರರು ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಉಳಿದವರು ವಾರದಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ.

