ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವುಗಳ ಕುರಿತು ಎ.ಐ ತಂತ್ರಜ್ಞಾನ ಬಳಸಿ ಕಾಲ್ಪನಿಕ ಹಾಗೂ ವಿವಾದಾತ್ಮಕ ವಿಡಿಯೋ ಸಿದ್ಧಪಡಿಸಿ ಯೂಟ್ಯೂಬ್ ನಲ್ಲಿ ಹರಿಬಿಟ್ಟಿದ್ದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಎಂಡಿ ಸಮೀರ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ನ್ಯಾಯಾಲಯ ಬುಧವಾರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಎಂಡಿ ಸಮೀರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದಗಳನ್ನು ಆಲಿಸಿದ ಪೀಠವು ತನಿಖೆಗೆ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ, ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ

