ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ಸುಪ್ರೀಂಕೋರ್ಟ್ ನಲ್ಲಿ ಮತ್ತೆ ಹಿನ್ನೆಡೆಯಾಗಿದೆ. ತಮ್ಮ ಜಾಮೀನು ಆದೇಶವನ್ನು ಪುನರ್ ಪರಿಶೀಲಿಸುವಂತೆ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಜಾಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಈ ಹಿಂದೆ ವಜಾ ಮಾಡಿತ್ತು. ಈ ಆದೆಶವನ್ನು ಪುನರ್ ಪರಿಶೀಲಿಸುವಂತೆ ಪವಿತ್ರಾ ಗೌಡ ದ್ವಿಸದಸ್ಯ ಪೀಠಕ್ಕೆ ಪವಿತ್ರಾ ಮನವಿ ಮಾಡಿದ್ದರು.
ತನ್ನ ಪುತ್ರಿ ಮತ್ತು ವೃದ್ಧ ಪೋಷಕರನ್ನು ಆರೈಕೆ ಮಾಡಬೇಕಾಗಿರುವುದರಿಂದ ಜಾಮೀನು ನೀಡುವಂತೆ ಅವರು ಕೋರಿದ್ದರು. ವಿಚಾರಣೆ ಸಂದರ್ಭದಲ್ಲಿ ಪೀಠವು, ನಾವು ಆದೇಶ ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ.

