ರೇಣುಕಾಸ್ವಾಮಿ ಕೊಲೆ ಪ್ರಕರಣ; ಆಸ್ಪತ್ರೆಯಿಂದ ಕೋರ್ಟ್ ಗೆ, ಮತ್ತೆ ಆಸ್ಪತ್ರೆಗೆ; ಇದು ದರ್ಶನಾವತಾರ

Most read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಪ್ರಮುಖ ಆರೋಪಿ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು. ನಂತರ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ರೆಗ್ಯುಲರ್ ಜಾಮೀನು ಮಂಜೂರು ಆಗಿದ್ದು, ಜಾಮೀನು ಪ್ರಕ್ರಿಯೆಗಳನ್ನು ಪೂಣಗೊಳಿಸಲು 57 ನೇ ಸಿಸಿಚ್ ನ್ಯಾಯಾಲಯಕ್ಕೆ ಆಗಮಿಸಿದ್ದರು. ಅಲ್ಲಿ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆಸ್ಪತ್ರೆಗೆ ಮರಳಿದ್ದಾರೆ.

ಈ ಸಂದರ್ಭದಲ್ಲಿ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ಜತೆಗಿದ್ದರು.
ವಿವಾದದ ನಂತರ ದರ್ಶನ್‌ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಪರೇಷನ್‌ ಮಾಡಿಸಬೇಕು. ಇಲ್ಲವಾದಲ್ಲಿ ಅವರಿಗೆ ಪಾರ್ಶ್ವವಾಯು ರೋಗಕ್ಕೆ ತುತ್ತಾಗುತ್ತಾರೆ ಎಂದೆಲ್ಲಾ ಅವರ ಪರ ವಕೀಲರು ಹೈಕೋರ್ಟ್‌ ನಲ್ಲಿ ವಾದ ಮಂಡಿಸಿ ಮಧ್ಯಂತರ ಜಾಮೀನು ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದ ನಟ ದರ್ಶನ್ ಒಂದೂವರೆ ತಿಂಗಳು ಕಳೆದರೂ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಬಿಪಿ ಹೆಚ್ಚು ಕಡಿಮೆ ಆಗುತ್ತಿರುವ ಕಾರಣಕ್ಕೆ ಶಸ್ತ್ರಚಿಕಿತ್ಸೆ ಮಾಡಿಲ್ಲ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಕೋರ್ಟ್‌ ನಲ್ಲೂ ಅವರು ಕಟೆಕಟೆಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದರು. ನ್ಯಾಯಾಧೀಶರಾದ ಜೈಶಂಕರ್ ಅವರು ಪಾಸ್‌ ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಲು ಮತ್ತು ಬೆಂಗಳೂರು ಬಿಟ್ಟು ಹೊರಗೆ ಹೋಗದಂತೆ ಸೂಚಿಸಿದರು.

ಪ್ರಕ್ರಿಯೆಗಳು ಮುಗಿದ ಂತರ ದೃಶನ್‌ ಮತ್ತೆ ಆಸ್ಪತ್ರೆಗೆ ಹಿಂತಿರುಗಿದ್ದಾರೆ. ಬಲ್ಲ ಮೂಲಗಳ ಪ್ರಕಾರ ಅವರು ಗುರುವಾರದವರೆಗೆ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ ದರ್ಶನ್‌ ಮತ್ತಿತರ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಓರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದಾರೆ. ಅನುಮತಿಗಾಗಿ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

More articles

Latest article