ರೇಣುಕಾಸ್ವಾಮಿ ಕೊಲೆ ಪ್ರಕರಣ; ಜಾಮೀನು ಪಡೆದಿರುವ ನಟ ದರ್ಶನ್‌ ಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ

Most read

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ನಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್‌ ಸೇರಿದಂತೆ ಇತರೆ 7 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟೀಸ್‌ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಯಿತು. ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು.

ಪ್ರಾಸಿಕ್ಯೂಷನ್‌ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ವಾದಿ ಮಂಡಿಸಿದರು. ಹೈಕೋರ್ಟ್‌ ನೀಡಿರುವ ಜಾಮೀನು ತೀರ್ಪನ್ನು ಬೇರೆಯವರು ಬಳಕೆ ಮಾಡಿಕೊಳ್ಳಬಾರದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿ ಎಲ್ಲಾ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿತು. ಬೇರೆ ಆರೋಪಿಗಳು ಜಾಮೀನು ಕೋರಿದರೆ ಹೈಕೋರ್ಟ್‌ನ ಆದೇಶವನ್ನು ಆಧರಿಸಬಾರದು ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.

ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಗಳಿಗೆ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿತ್ತು. ಕೋರ್ಟ್‌ನ ತೀರ್ಮಾನಕ್ಕೆ ಬೆಂಗಳೂರು ಪೊಲೀಸರು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿ ಅಗತ್ಯ ಸಿದ್ಧತೆ ಮಾಡಿಕೊಂಡು ಸುಪ್ರೀಂ ಕೋರ್ಟ್‌ಗೆ ಜನವರಿ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸಿದ್ದರು. ಸರ್ಕಾರವು ವಕೀಲರನ್ನು ನೇಮಕ ಮಾಡಿತ್ತು. ಪವಿತ್ರಾ ಗೌಡ, ದರ್ಶನ್‌ , ಜಗದೀಶ್‌ ಜಗ್ಗ ಅಲಿಯಾಸ್‌ ಜಗ್ಗ, ಅನುಕುಮಾರ್‌ ಅಲಿಯಾಸ್‌ ಅನು, ಆರ್‌ ನಾಗರಾಜು, ಎಂ ಲಕ್ಷ್ಮಣ್‌, ಪ್ರದೋಶ್‌ ಎಸ್‌. ರಾವ್‌ ಜಾಮೀನು ಪಡೆದಿರು ಆರೋಪಿಗಳು.

More articles

Latest article