ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಜೈಲೋ? ಜಾಮೀನೋ? ತೀರ್ಪು ಕಾಯ್ದಿರಿಸಿದ‌ ಸುಪ್ರೀಂಕೋರ್ಟ್

Most read

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ ಪವಿತ್ರಾ ಗೌಡ ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಇಂದು ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್, ಅದೇಶವನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಈ ಪೈಕಿ ದರ್ಶನ್, ಪವಿತ್ರಾ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ​ಗೆ ಅರ್ಜಿ ಸಲ್ಲಿಸಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ತೀರ್ಪನ್ನು ಕಾಯ್ದಿರಿಸಿದ್ದಾರೆ.

ವಾದ ಪ್ರತಿವಾದ ನಡೆಯುವ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದಕ್ಕೆ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರದ ಪರ ಸಿದ್ಧಾರ್ಥ್ ಲೂಥ್ರಾ ಹಾಗೂ ದರ್ಶನ್‌ ಪರ ಸಿದ್ಧಾರ್ಥ್ ದವೆ ವಾದಿಸಿದರು. ದರ್ಶನ್ ‘ಡೆವಿಲ್’ ಸಿನಿಮಾ ಶೂಟಿಂಗ್​ ಗೆ ಥೈಲ್ಯಾಂಡ್ ಗೆ ತೆರಳಿದ್ದು ನಾಳೆ ಹಿಂತಿರುಗಲಿದ್ದಾರೆ.

More articles

Latest article