ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ 7 ಮಂದಿಯ ಜಾಮೀನು ರದ್ದುಪಡಿಸಲಾಗಿದೆ. ಈ ಹಿಂದೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್ ಇದೀಗ ತೀರ್ಪು ಪ್ರಕಟಿಸಿದೆ.
ಹೈಕೋರ್ಟ್ ನೀಡಿರುವ ಜಾಮೀನು ಆದೇಶದ ಲೋಪಗಳನ್ನು ಎತ್ತಿ ತೋರಿಸಿರುವ ಸುಪ್ರೀಂ ಕೋರ್ಟ್, ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಆದೇಶಿಸಿದೆ.
ಹೈಕೋರ್ಟ್ ನೀಡಿರುವ ಜಾಮೀನು ಆದೇಶದಲ್ಲಿ ದೋಷವಿದ್ದು ಕೇವಲ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಜಾಮೀನು ನೀಡಲಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಆರೋಪಿಗಳಿಗೆ ಉತ್ತಮ ಆತಿಥ್ಯ ನೀಡಲಾಗಿದೆ. ಜೈಲು ಸೂಪರಿಂಟೆಂಡ್ ಅವರನ್ನು ಅಮಾನತ್ತು ಮಾಡಬೇಕಿತ್ತು ಎಂದೂ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ ವರ್ಷ ಜೂನ್ 11ರಂದು ದರ್ಶನ್ ಮತ್ತು ಇತರ ಆರೋಪಿಗಳನ್ನು ಬಂಧಿಸಲಾಗಿತ್ತು