ದಕ್ಷಿಣ ಕನ್ನಡ : ಕುಮಾರಧಾರ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

Most read

ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ.

ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ ಪುಳಿಕುಕ್ಕು ಗ್ರಾಮದಲ್ಲಿರುವ ಕುಮಾರಧಾರಾ ನದಿ ಇಳಿದಿದ್ದರು, ಈ ಸಂದರ್ಭದಲ್ಲಿ ಆಯತಪ್ಪಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಇನ್ನೊಂದೆಡೆ ಇವರು ಆತ್ಮಹತ್ಯೆಗೆ ಪ್ರಯತ್ನ ಪಟ್ಟು ನದಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯೂ ಸಹ ಕೇಳಿಬರುತ್ತಿದೆ.

ರವಿಕುಮಾರ್ ಅವರು ನದಿ ಮಧ್ಯೆ ಪೊದೆ ಹಿಡಿದುಕೊಂಡು ನಿಂತಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಈ ವಿಚಾರವನ್ನು ಕೂಡಲೇ ಅವರು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಕಡಬ ಎಸ್‍ಐ ಅಭಿನಂದನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಕುಮಾರಧಾರಾ ನದಿಯಲ್ಲಿ ಸಿಲುಕಿದ ರವಿಕುಮಾರ್ ರನ್ನು ಅಗ್ನಿಶಾಮಕ ದಳ ಮತ್ತು ಸ್ಥಳೀಯ ಶೌರ್ಯ ತಂಡದಿಂದ ರಕ್ಷಣೆ ಮಾಡಲಾಗಿದೆ. ಇದೀಗ ರವಿಕುಮಾರ್ ಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

More articles

Latest article