ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ : ACMM ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆರಂಭ

Most read

ಹೊಳೆ ನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌.ಡಿ ರೇವಣ್ಣ  ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭವಾಗಿದೆ.

ನಿನ್ನೆ ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ, ಇಂದು ಮಧ್ಯಾಹ್ನದ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ 5 ಲಕ್ಷ ರೂಪಾಯಿ ಬಾಂಡ್ ನೀಡಲು ಮಾಜಿ ಸಚಿವರಿಗೆ ಸೂಚನೆ ನೀಡಿತ್ತು.  ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಕೋರ್ಟ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ.

ಹೆಚ್.ಡಿ.ರೇವಣ್ಣಪರ ವಕೀಲ ಸಿ.ವಿ. ನಾಗೇಶ್ ಹಾಜರು. ಎಸ್ ಐಟಿ ಪರ ವಕೀಲೆ ಜಾಯ್ನಾ ಕೊಠಾರಿ ಹಾಜರಿದ್ದು ವಾದ ಮಂಡಿಸಲು ಪ್ರರಂಭಿಸಿದ್ದಾರೆ.

More articles

Latest article