ಕಿಡ್ನಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ ಹೆಚ್ ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಕೇಸಿನಲ್ಲಿ ಜೈಲು ಪಾಲಾಗುವ ಭಯವಿತ್ತು. ಆದರೆ ಈಗ ಅವರಿಗೆ ACMM ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಇದೀಗ ಹೊಳೆ ನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರು. ಜಾಮೀನು ಸಹಿತ ಪ್ರಕರಣ ಆದ ಹಿನ್ನೆಲೆ ಗುರುವಾರ ಜಾಮೀನಿಗಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಎರಡೂ ಕಡೆ ವಿಚಾರಣೆ ನಡೆಸಿದ ಕೋರ್ಟ್ ರೇವಣ್ಣಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು 21 ಗಂಟೆಗೆ ಮಾತ್ರ ಮಂಜೂರಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆ ಮತ್ತೆ ವಿಚಾರಣೆಗೆ ಹಾಜರಾಗಬೇಕಿದೆ.
ಕೋರ್ಟ್ 5 ಲಕ್ಷ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ 42 ಎಸಿಎಂಎಂ ನ್ಯಾಯಧೀಶರಾದ ಪ್ರೀತ್ ಆದೇಶಿಸಿದ್ದಾರೆ. ನಾಳೆ ಮಧ್ಯಾಹ್ನ ಮತ್ತೆ ರೇವಣ್ಣ ಕೋರ್ಟ್ಗೆ ಹಾಜರಾಗಬೇಕಿದ್ದು, ಮತ್ತೆ ವಿಚಾರಣೆ ಮುಂದುವರಿಯಲಿದೆ.