ರೇವಣ್ಣಗೆ ಸಿಗಲಿಲ್ಲ ಬೇಲು, ಮೇ 14ರವರೆಗೆ ಜೈಲು.

ಬೆಂಗಳೂರು: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಗಲಿಲ್ಲ. ಹೀಗಾಗಿ ರೇವಣ್ಣ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಲಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ನಡೆದು ಮೇ. 14ರವರೆಗೆ ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು, ಪ್ರಭಾವಿಯಾಗಿರುವ ರೇವಣ್ಣ ಸಾಕ್ಷ್ಯ ನಾಶ ಪಡಿಸೋ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದ SIT ಪರ ವಾದ‌ ಮಂಡಿಸಿದ ಸರ್ಕಾರಿ ಅಭಿಯೋಜಕರು ಕೋರಿದರು.

ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ಹಾಕಲಾಗಿದೆ. ಇವೆಲ್ಲವೂ ಜಾಮೀನು ನೀಡಬಹುದಾದ ಪ್ರಕರಣ. ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋಡಿ ಎಂದು ರೇವಣ್ಣ ಪರ ವಾದ ಮಂಡಿಸಿದ ನ್ಯಾಯವಾದಿ ಡಿ.ನಾಯಕ್ ಕೋರಿದರು.

ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹಿನ್ನೆಲೆಯಲ್ಲಿ ರೇವಣ್ಣ ಇಂದು ಪರಪ್ಪನ‌ ಅಗ್ರಹಾರದಲ್ಲಿ ಕಾಲ‌ ಕಳೆಯಬೇಕಿದೆ.

More articles

Latest article

Most read