ಹೆಬ್ಬಾಳ್ಕರ್‌ ಮತ್ತು ರವಿ ಇಬ್ಬರೂ ವಿವಾದಕ್ಕೆ ಕೊನೆ ಹಾಡಬೇಕು :ಹೊರಟ್ಟಿ

ದಾವಣಗೆರೆ: ಸದನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರೂ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಡಿ.19ರಂದು ಸದನದಲ್ಲಿ ನಡೆದ ಬೆಳವಣಿಗೆಗಳನ್ನು ನಾನು ಗಮನಿಸಿದ್ದೇನೆ. ದಾಖಲೆಗಳನ್ನೂ ಪರಿಶೀಲಿಸಿದ್ದೇನೆ. ಈ ವಿಷಯವನ್ನು ಮುಂದುವರೆಸುವುದರಲ್ಲಿ ಅರ್ಥವಿಲ್ಲ. ಆದ್ದರಿಂದ ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಬಯಕೆ ಎಂದು ಅವರು  ಸುದ್ದಿಗಾರಿಗೆ ತಿಳಿಸಿದರು.

ವಿಧಾನಪರಿಷತ್‌ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಭಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

More articles

Latest article

Most read