Wednesday, December 11, 2024

‘ರಿಪ್ಪನ್ ಸ್ವಾಮಿ’ಗೆ ಸೆನ್ಸಾರ್ : 2025ರ ಆರಂಭದಲ್ಲಿಯೇ ರಿಲೀಸ್

Most read

ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ಸಿನಿಮಾ ರಿಪ್ಪನ್ ಸ್ವಾಮಿ, ರಿಲೀಸ್ ಗೆ ರೆಡಿಯಾಗಿದೆ. ಹೊಸ ವರ್ಷದ ಹಾದಿಯಲ್ಲಿ ಮನರಂಜನೆ ಕೊಡುವುದಕ್ಕೆ ಸಿದ್ಧವಾಗಿದೆ. ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. 2025ರ ಜನವರಿ ಕೊನೆಯ ವಾರದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಹಾಕಿಕೊಂಡಿದೆ ಚಿತ್ರರಂಗ.

ಈ ಮೊದಲು ಮಾಲ್ಗುಡಿ ಡೇಸ್ ಸಿನಿಮಾ ನಿರ್ದೇಶನ ಮಾಡಿದ್ದ ಯುವ ನಿರ್ದೇಶಕ ಕಿಶೋರ್ ಮೂಡಬಿದ್ರೆ ರಿಪ್ಪನ್ ಸ್ವಾಮಿ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಕಂಟೆಂಟ್ ಅನ್ನು ಹೊಂದಿರುವ ಈ ಸಿನಿಮಾ ಆರಂಭದಿಂದಾನೂ ಸಿಕ್ಕಾಪಟ್ಟೆ ಟಾಕ್ ಕ್ರಿಯೇಟ್ ಮಾಡಿದೆ. ಫಸ್ಟ್ ಲುಕ್ ನಲ್ಲಿಯೇ ವಿಜಯ್ ರಾಘವೇಂದ್ರ ಅವರು ರಾ ಲುಕ್ ನಲ್ಲಿ ಕಿಕ್ ಕೊಟ್ಟಿದ್ದರು. ಚಿನ್ನಾರಿ ಮುತ್ತನ ನೋಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದರು. ಹೀಗಾಗಿ ಸಿನಿಮಾದ ಮೇಲೆ ಬೇರೆಯದ್ದೇ ನಿರೀಕ್ಷೆ ಇದೆ. ವಿಜಯ್ ರಾಘವೇಂದ್ರ ಜೋಡಿಯಾಗಿ ಶಿವಮೊಗ್ಗ ಮೂಲದ ಕನ್ನಡ, ತಮಿಳು, ತೆಲುಗು ಸಿನಿಮಾದಲ್ಲಿ ನಟಿಸಿರುವ ಅಶ್ವಿನಿ ಚಂದ್ರಶೇಖರ್ ನಟಿಸಿದ್ದಾರೆ. ಉಳಿದಂತೆ ಪ್ರಕಾಶ್ ತುಮ್ಮಿ ನಾಡು ,ವಜ್ರದೀರ್ ಜೈನ್ ,ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್, ಪ್ರಭಾಕರ್ ಕುಂದಾರ್, ರಂಜನ್‌ ಶೆಟ್ಟಿ, ಸಂತೋಷ್ ಶೆಟ್ಟಿ ಮುಂತಾದವರು ಇದ್ದಾರೆ.

ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಕೈಜೋಡಿಸಿ ನಿರ್ಮಾಣ ಮಾಡಿದ್ದಾರೆ. ಪಂಚಾನನ ಫಿಲಂಸ್ ನ ಮೊದಲನೇ ಸಿನಿಮಾ ಇದಾಗಿದೆ. ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡಿದ್ದಾರೆ. ರಂಗನಾಥ್ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ. ಶಶಾಂಕ್ ನಾರಯಣ್ ಸಂಕಲನ ಮಾಡಿದ್ದಾರೆ. ಜನವರಿಗೆ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ.

More articles

Latest article