ರಿಜ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿಯಲ್ಲಿ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವೂದು ಅಪರಾಧವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ವಾದ-ಪ್ರತಿವಾದವನ್ನು ಆಲಿಸಿದ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಚುನಾವಣಾ ಅಕ್ರಮಕ್ಕೆ ಪೂರಕ ಸಾಕ್ಷ್ಯ ನೀಡಿಲ್ಲವೆಂದು ಅರ್ಜಿ ವಜಾಗೊಳಿಸಿದೆ.

More articles

Latest article

Most read