ರಾಜಸ್ಥಾನದಲ್ಲಿ ಭೀಕರ ಅಪಘಾತ: 7 ಮಕ್ಕಳು, 4 ಮಹಿಳೆಯರು ಸೇರಿ 11 ಮಂದಿ ಸಾವು; 8 ಮಂದಿಗೆ ಗಂಭೀರ ಗಾಯ

ಜೈಪುರ: ಇಂದು ನಸುಕಿನ ಜಾವ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಂತಿದ್ದ ಟ್ರಕ್‌ ಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಇವರೆಲ್ಲರೂ  ಉತ್ತರ ಪ್ರದೇಶದ ಇಟಾದಲ್ಲಿರುವ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಪಿಕಪ್ ವ್ಯಾನ್‌ ನಲ್ಲಿ 20 ಮಂದಿ ಪ್ರಯಾಣಿಕರಿದ್ದು, ಇವರೆಲ್ಲರೂ ಖಾತು ಶ್ಯಾಮ್‌ ಮತ್ತು ಸಲಾಸರ್‌ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಮನೋಹರ್‌ ಪುರ ಹೆದ್ದಾರಿಯಲ್ಲಿ ಇಂದು ಮುಂಜಾನೆ 4 ಗಂಟೆಗೆ ಅಪಘಾತ ಸಂಭವಿಸಿದೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

More articles

Latest article

Most read