ನವದೆಹಲಿ: ಜಮೀನು ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇಂದು ಜಾರಿ ನಿರ್ದೇಶನಾಲಯ(ಇ.ಡಿ) ಕಚೇರಿಗೆ ಇಂದು ಹಾಜರಾಗಿದ್ದಾರೆ. ವಾದ್ರಾ ಅವರ ಮಾಲೀಕತ್ವದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿ ಹರಿಯಾಣದ ಗುರುಗ್ರಾಮ ಸೆಕ್ಟರ್ 83, ಶಿಕೊಪುರ, ಸಿಕಂದರ್‌ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ ರೂ.7.5 ಕೋಟಿಗೆ ಭೂಮಿ ಖರೀದಿಸಿ, ಅದನ್ನು ರೂ.55 ಕೋಟಿಗೆ ಮಾರಾಟ ಮಾಡಿದೆ ಎಂದು ದೂರು ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸುವಂತೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು. ಅದರಂತೆ ಇಂದು ಹಾಜರಾಗಿದ್ದಾರೆ.
ಹರಿಯಾಣದ ಶಿಕೊಪುರದಲ್ಲಿ ನಡೆದಿರುವ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಏಪ್ರಿಲ್ 8ರಂದು ಸಮನ್ಸ್ ನೀಡಲಾಗಿತ್ತು. ಆದರೆ, ವಾದ್ರಾ ವಿಚಾರಣೆಗೆ ಹಾಜರಾಗಲಿಲ್ಲ.