ರೌಡಿ ಸುನೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

Most read

ಆನೇಕಲ್: ಕೊಲೆ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಎಂಬಾತನ ಕಾಲಿಗೆ ಆನೇಕಲ್ ಪೊಲೀಸರು ಗುಂಡು ಹಾರಿಸಿದ್ದಾರೆ. ಈತ ಕೊಲೆ ಸೇರಿದಂತೆ ಹಲವು ಆರೋಪಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಈತ ಆನೇಕಲ್‌ಗೆ ಆಗಮಿಸುವ ಖಚಿತ ಮಾಹಿತಿ ಲಭ್ಯವಾಗಿತ್ತು. ಹಾಗಾಗಿ ಪೊಲೀಸರು ಆತನ ಬಂಧನಕ್ಕೆ ತೆರಳಿದ್ದರು. ಅಲ್ಲಿ ಪೊಲೀಸರು ಆತನಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಬದಲಾಗಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಅತ್ತಿಬೆಲೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವ್ ಗೌಡ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಕಳೆದ ನವೆಂಬರ್ನಲ್ಲಿ ಜಿಗಣಿ ಬಳಿ ರೌಡಿಶೀಟರ್ ಮನೋಜ್ ಗ್ಯಾಂಗ್ ಮೇಲೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್‌ ಐಆರ್‌ ದಾಖಲಾದ ನಂತರ ಸುನೀಲ್ ತಲೆಮರೆಸಿಕೊಂಡಿದ್ದ. ಅಲ್ಲದೇ, ಆರೋಪಿ ವಿರುದ್ಧ ಮರಸೂರು ಗೇಟ್ ಪೆಟ್ರೋಲ್ ಬಂಕ್ ಗಲಾಟೆ, ಒಂದು ಕೊಲೆ ಎರಡು ಕೊಲೆ ಯತ್ನ ಸೇರಿದಂತೆ ಒಟ್ಟು 7 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆತನ ವಿರುದ್ಧ ಅರೆಸ್ಟ್ ವಾರೆಂಟ್ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿಶೀಟರ್ ನಡೆಸಿದ ಹಲ್ಲೆಯಿಂದ ವಿನಯ್ ಎಂಬ ಕಾನ್ಸ್ಟೇಬಲ್ ಕೈಗೆ ಗಾಯವಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ರೌಡಿಶೀಟರ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ನಾಗೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

More articles

Latest article