Saturday, December 7, 2024

ಬೀಗ ಹಾಕಿದ್ದ ಮನೆಗಳಲ್ಲಿ ಕಳವು ಮಾಡುತ್ತಿದ್ದ ರೌಡಿ, ಪತ್ನಿ ಬಂಧನ:

Most read

ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳವು ಮಾಡುತ್ತಿದ್ದ ಓರ್ವ ರೌಡಿ ಶೀಟರ್ ಆತನ ಪತ್ನಿ ಸೇರಿದಂತೆ ಐವರನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬ್ಯಾಡರಹಳ್ಳಿಯ ಮಾಣಿಕ್ಯ (26), ರೌಡಿಶೀಟರ್
ಗೌತಮ್ ಶೆಟ್ಟಿ(30), ಆತನ ಪತ್ನಿ ಶಿಬಾ(28),
ಸಹಚರರಾದ ದಯಾನಂದ್(27) ಮತ್ತು
ನರಸಿಂಹ(28) ಬಂಧಿತ ಆರೋಪಿಗಳು.

ಇವರಿಂದ 21 ಲಕ್ಷ ಮೌಲ್ಯದ 325
ಗ್ರಾಂ ಚಿನ್ನಾಭರಣ, ಒಂದು ಕೆ.ಜಿ 800 ಗ್ರಾಂ
ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಎಚ್‌ಎಂಟಿ ಲೇಔಟ್‌ನ
ಮನೆಯೊಂದರ ಬೀಗ ಒಡೆದು ಒಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಮನೆ ಮಾಲೀಕರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕದ್ದ ಚಿನ್ನಾಭರಣಗಳನ್ನು ಖಾಸಗಿ ಹಣಕಾಸು ಸಂಸ್ಥೆ ಹಾಗೂ ಚಿನ್ನದ ಅಂಗಡಿಗಳಲ್ಲಿ ಅಡವಿಡುತ್ತಿದ್ದರು. ಅಂಗಡಿಗಳಿಂದ ಆ ಚಿನ್ನವನ್ನೂ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಗೌತಮ್ ಶೆಟ್ಟಿ ಮಾಗಡಿ ರಸ್ತೆ ಠಾಣೆಯ ರೌಡಿ ಶೀಟರ್ ಆಗಿದ್ದಾನೆ. ಆತನ ಪತ್ನಿ ಶೀಬಾ ಪತಿಯ ದುಷ್ಕೃತ್ಯ ಗಳಿಗೆ ಸಹಕಾರ ನೀಡುತ್ತಿದ್ದಾಳೆ. ಮತ್ತೊಬ್ಬ ಆರೋಪಿ ಮಾಣಿಕ್ಯ ನ ವಿರುದ್ಧ ಬೆಂಗಳೂರಿನ ಹತ್ತಕ್ಕೂ ಹೆಚ್ಚು ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article