Sunday, July 14, 2024

ಆರ್​ಎಸ್​ಎಸ್​ ಕಚೇರಿ ಉದ್ಘಾಟನೆಯಲ್ಲಿ ಶಾಸಕ‌ ದರ್ಶನ್ ಪುಟ್ಟಣ್ಣಯ್ಯ ಭಾಗಿ

Most read

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಆರ್​ಎಸ್​ಎಸ್​ ಕಚೇರಿ ಉದ್ಘಾಟಿಸಲಾಯಿತು. ಈ ಸಮಾರಂಭದಲ್ಲಿ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನವೇ ಪಾಂಡವಪುರದಲ್ಲಿ ಆರ್​ಎಸ್​ಎಸ್​ ಕಚೇರಿ ಉದ್ಘಾಟನೆ ಮಾಡಿದ್ದು ಖುಷಿಯ ವಿಷಯ. ಸಮಾರಂಭದಲ್ಲಿ ಮುಖಂಡರ ಮಾತು ಕೇಳಿ ರಾಮನದ್ದು ಜಾತ್ಯತೀತ ವ್ಯಕ್ತಿತ್ವ ಎಂದು ಅರ್ಥವಾಗಿದೆ. ಎಲ್ಲರೂ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅನಿಸಿಕೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹೇಳಿದರು.

ನೂತನ ಕಚೇರಿ ಉದ್ಘಾಟನೆಗೆ ಬಿಜೆಪಿ ನಾಯಕರು, ಜೆಡಿಎಸ್ ಮಾಜಿ ಶಾಸಕ ಸಿಎಸ್ ಪುಟ್ಟರಾಜು, ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ರೈತಸಂಘದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡಿದ್ದರು.

More articles

Latest article