ರಾಜ್ಯದ ಹಲವು ಆರ್​ಟಿಓ ಕಚೇರಿ, ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

Most read

ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​ಗಳು, ಕಚೇರಿ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ಕೋಲಾರ ಜಿಲ್ಲೆಯ ಎರಡು ಆರ್‌ ಟಿ ಒ ಚೆಕ್‌ ಪೋಸ್ಟ್‌ ಮೇಲೆ ದಾಳಿ ಮಾಡಿದ್ದು, ಅನೇಕ ದಾಖಲಾತಿ ಹಾಗೂ ಹಣ ಪತ್ತೆಯಾಗಿದೆ. ಇದನ್ನು ವಶಪಡಿಸಿಕೊಂಡು ಲೆಕ್ಕ ಪರಿಶೀಲನೆ ಮಾಡಿ. ವಿಚರಣೆ ಹಾಗೂ ಕಾರ್ಯಚರಣೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

More articles

Latest article