ರುದ್ರಣ್ಣ ಆತ್ಮಹತ್ಯೆ: ನಿಷ್ಪಕ್ಷಪಾತ ತನಿಖೆಯಾಗಲಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ರುದ್ರಣ್ಣ ಸಾವಿನ ಘಟನೆ ಬಗ್ಗೆ ಮಾಧ್ಯಮಗಳ ಮೂಲಕ ನಾನು ತಿಳಿದಿದ್ದೇನೆ. ಈ ಬಗ್ಗೆ ನನಗೂ ಹೆಚ್ಚೇನು ಮಾಹಿತಿ ಇಲ್ಲ. ಈ ಸಾವಿನ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಪಾತ್ರವಿಲ್ಲವೆಂದು ಅವರೇ ಹೇಳಿದ್ದಾರೆ. ಈ ಬಗ್ಗೆ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

More articles

Latest article

Most read