ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು :  ಹೈಕೋರ್ಟ್‌

ಬೆಂಗಳೂರು : ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ  ಶಾಸಕರಾಗಿ  ಆಯ್ಕೆಯಾಗಿದ್ದನ್ನು  ಅಸಿಂಧುಗೊಳಿಸಿ,  ನ್ಯಾ.ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. 

ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಸುಬ್ಬಾರೆಡ್ಡಿ  ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ್ದ ಸಿ. ಮುನಿರಾಜು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ. 
ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.    ಅಸಿಂಧುಗೊಳಿಸಿದ ಆದೇಶವನ್ನು  ಚುನಾವಣಾ ಆಯೋಗಕ್ಕೆ ರವಾನೆ ಮಾಡಲು ಹೈಕೋರ್ಟ್ ಆದೇಶಿಸಿದೆ.   ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ಹೈಕೋರ್ಟ್ ಆದೇಶ ನೀಡಿದೆ.

ಮೇಲ್ಮನವಿ ಸಲ್ಲಿಕೆವರೆಗೆ ತನ್ನ ಆದೇಶಕ್ಕೆ ತಡೆಯಾಜ್ಞೆ ನೀಡಲು  ಎಸ್.ಎನ್.ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ಮನವಿ ಮಾಡಿದ್ದರು. ಆದರೇ, ಈ ಮನವಿಗೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
 
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ತಡೆಯಾಜ್ಞೆ   ಮೇಲ್ಮನವಿ ಸಲ್ಲಿಸಲು ಎಸ್‌.ಎನ್‌.ಸುಬ್ಬಾರೆಡ್ಡಿ ಗೆ ಅವಕಾಶವಿದೆ.  6 ತಿಂಗಳೊಳಗಾಗಿ ಸುಪ್ರೀಂ ತಡೆಯಾಜ್ಞೆ ನೀಡದಿದ್ದರೇ ಬಾಗೇಪಲ್ಲಿ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸಬೇಕಾಗುತ್ತದೆ. 

More articles

Latest article

Most read