ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿ ಹಾಲಿ ಸಂಸದರಾದ ಡಿ ವಿ ಸದಾನಂದ ಗೌಡರಿಗೆ ಟಿಕೆಟ್ ಕೈ ತಪ್ಪಿದ್ದು, ಮಾಜಿ ಸಿಎಂ ಸದಾನಂದ ಗೌಡ ತಮ್ಮ ಫೇಸ್ ಬುಕ್ ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಈ ಕುರಿತು ತಮ್ಮ ಪೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಕೈ ತಪ್ಪಿದ ಟಿಕೆಟ್? ಮಾಜಿ ಸಿಎಂ ಸದಾನಂದ ಗೌಡ ಕಾಂಗ್ರೆಸ್ ಆಹ್ವಾನ
ಲೋಕಸಭೆ ಚುನಾವಣೆಯಲ್ಲಿ ಸದಾನಂದಗೌಡರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವದಂತಿಗಳ ಬೆನ್ನಲ್ಲೇ ಮತ್ತೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಸುಗುಸು ಕೇಳಿ ಬರುತ್ತಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಅಚ್ಚರಿ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದಾರ ಸದಾನಂದ ಗೌಡರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಡಿಕೆ ಶಿವಕುಮಾರ್, ಅವರು ಪಕ್ಷಕ್ಕೆ ಬಂದರೆ ಸ್ವಾಗತ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ 15 ಕ್ಕೆ ಬಿಡುಗಡೆಯಾಗಲಿದೆ. ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆಯ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.